ಪತ್ನಿಯ ಸಾವು- ದುಖ: ತಡೆಯಲಾಗದೆ ಪತಿ ಆತ್ಮಹತ್ಯೆ

ಮ‌ಂಗಳೂರು/ ದಿಸ್ಪುರ್: ಆಸ್ಪತ್ರೆಯಲ್ಲಿ ಕ್ಯಾನ್ಸರ್​ನಿಂದ ಪತ್ನಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೇ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್‌ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ 2009ರ ಬ್ಯಾಚ್‌ನ ಡಿಐಜಿ ಶ್ರೇಣಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ (44) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಆಗಮೊನೀ ಬಾರ್ಬರುವಾ ಕಳೆದ 2 ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ನೆಮ್‌ಕೇರ್ ಖಾಸಗಿ ಆಸ್ಪತ್ರೆಗೆ ಎರಡು ತಿಂಗಳು ಹಿಂದೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ  4 ತಿಂಗಳಿನಿಂದ ರಜೆಯಲ್ಲಿದ್ದು,ಆಸ್ಪತ್ರೆಯಲ್ಲಿ ತಂಗಿದ್ದರು. ಇದಕ್ಕಾಗಿ ಅನುಮತಿ ಪಡೆದುಕೊಂಡು ಪ್ರತ್ಯೇಕ ರೂಮ್​ ತೆಗೆದುಕೊಂಡಿದ್ದರು. ಕಳೆದ 3 ದಿನಗಳಿಂದ ಅವರ ಪತ್ನಿಯ ಸ್ಥಿತಿ ಚಿಂತಾಜನಕವಾಗಿತ್ತು. ಅದರಂತೆ ಅವರು ಆಸ್ಪತ್ರೆಯ ಐಸಿಯುನಲ್ಲಿ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಅಲ್ಲೇ ಇದ್ದ ಗಂಡನಿಗೆ ವೈದ್ಯರು ತಿಳಿಸಿದ್ದಾರೆ.

ಐಸಿಯುನಲ್ಲಿದ್ದ ಮೃತ ಪತ್ನಿ ಬಳಿಗೆ ತಕ್ಷಣ ಗಾಬರಿಯಿಂದ ಓಡೋಡಿ ಬಂದು ದುಃಖಿತರಾಗಿದ್ದಾರೆ. ಬಳಿಕ ನಾನು ಪ್ರಾರ್ಥನೆ ಮಾಡಬೇಕೆಂದು ಹೇಳಿ ಐಸಿಯುನಲ್ಲಿದ್ದ ಡಾಕ್ಟರ್ಸ್, ನರ್ಸ್​ಗಳನ್ನ ಹೊರಗೆ ಕಳುಹಿಸಿದ್ದಾರೆ. ಇದಾದ 10 ನಿಮಿಷದ ಬಳಿಕ ತಮ್ಮಲ್ಲಿದ್ದ ಸರ್ಕಾರದ ಗನ್​​ನಿಂದ ತಲೆಗೆ ಶೂಟ್​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸೌಂಡ್ ಕೇಳುತ್ತಿದ್ದಂತೆ ಅಸ್ಪತ್ರೆಯ ಸಿಬ್ಬಂದಿ, ಡಾಕ್ಟರ್ಸ್​ ಎಲ್ಲ ಓಡೋಡಿ ಬಂದು ಏನಾಯಿತು ಎಂದು ನೋಡಿದ್ದಾರೆ. ಆದ್ರೆ ಪತ್ನಿ ಪಕ್ಕದಲ್ಲೇ ಗಂಡ ಶವವಾಗಿ ಬಿದ್ದಿದ್ದರು. ಸದ್ಯ ಇವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಸ್ಸಾಂನ ಪೊಲೀಸ್ ಇಲಾಖೆ ಸಂತಾಪ ವ್ಯಕ್ತಪಡಿಸಿವೆ.

LEAVE A REPLY

Please enter your comment!
Please enter your name here