ಮಂಗಳೂರು/ ನವದೆಹಲಿ: ತೀವ್ರ ತಾಪಮಾನದಿಂದ ಉತ್ತರ ಮತ್ತು ಪೂರ್ವ ಭಾರತದ ಜನ ಸಂಕಷ್ಟಕ್ಕೆ ಸಿಲುಕಿದ್ದು ಐವತ್ತಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ರೋಗಿಗಳ ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ ಸಲಹೆ ಹಾಗೂ ಸೂಚನೆ ನೀಡಿದೆ.ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹೇಳಿದೆ. ಈ ಮೂಲಕ ಈಗ ಉಂಟಾಗಿರುವ ಹೀಟ್ ವೇವ್ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 43 ರಿಂದ 45 ಡಿಗ್ರಿ ಸೆಲ್ಸಿಯಸ್ನಷ್ಟಿದೆ ಎಂದು IMD ತಿಳಿಸಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಲ್ಲಿ ಹೀಟ್ ಸ್ಟ್ರೋಕ್ ಮತ್ತು ಶಾಖದ ಬಳಲಿಕೆಯಿಂದ ಹಲವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಗಳು ಹೇಳಿದೆ.