ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ಮಂಗಳೂರು(ನವದೆಹಲಿ): 2021-22ರ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ನಿನ್ನೆ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರಾದ ನಿಯಯ್ ಬಿಂದು 2 ದಿನಗಳ ಕಾಲ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ, ಇಂದು ಈ ಪ್ರಕರಣದ ಆದೇಶ ಪ್ರಕಟಿಸಿದೆ. ಆದರೆ ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿದೆ.

ಈ ಆದೇಶವನ್ನು ಜಾರಿಗೊಳಿಸಿದ ನಂತರ, ಇಡಿ ತನ್ನ ಕಾನೂನು ಪರಿಹಾರಗಳನ್ನು ಚಲಾಯಿಸಲು 48 ಗಂಟೆಗಳ ಕಾಲಾವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು. ಆದರೆ, ನ್ಯಾಯಾಧೀಶರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದರು.ಎಎಪಿ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ 1 ಲಕ್ಷ ರೂ. ಜಾಮೀನು ಬಾಂಡ್ ಪಾವತಿಸಿ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬರಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಂಜಯ್ ಸಿಂಗ್ ನಂತರ ಈ ಪ್ರಕರಣದಲ್ಲಿ ಜಾಮೀನು ಪಡೆದ ಎರಡನೇ ಎಎಪಿ ನಾಯಕರಾಗಿದ್ದಾರೆ. ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಲ್ಲಿಯೇ ಇನ್ನೂ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here