ಡಾ. ಧನಂಜಯ್‌ ಸರ್ಜಿ ಸೇರಿದಂತೆ ವಿಧಾನ ಪರಿಷತ್‍ನ 17 ಮಂದಿ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಮಂಗಳೂರು/ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಶಿಕ್ಷಕ-ಪದವೀಧರರ ಕ್ಷೇತ್ರಗಳಿಂದ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ 17 ಮಂದಿ ಸದಸ್ಯರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ  ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ ಐವನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್. ಬೋಸರಾಜು, ಯತೀಂದ್ರ ಎಸ್., ಎ.ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಸೇರಿದಂತೆ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಬಸವರಾಜ ಪಾಟೀಲ್, ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದೀಯ ಸಚಿವ ಎಚ್.ಕೆ.ಪಾಟೀಲ್‌, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here