ಪತ್ರಕರ್ತ ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ ʼಬ್ರ‍್ಯಾಂಡ್ ಮಂಗಳೂರುʼ ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ.
ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ “‌ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ನೇತೃತ್ವದ ಸಮಿತಿಯು ಈ ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.27ರಂದು ಬೆಳಗ್ಗೆ ಪತ್ರಿಕಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರವಾಲ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೇಯರ್‌ ಸುಧೀರ್ ಶೆಟ್ಟಿ ಕಣ್ಣೂರು, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ, ಜಿಲ್ಲಾ ಆಯುಷ್‌ ಅಧಿಕಾರಿ ಇಕ್ಬಾಲ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here