ಮಂಗಳೂರು: ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಸಿದ್ದು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಮುಖಂಡರು, ಕಾರ್ಯಕರ್ತರು ಮುಂದಾಗಿದ್ದು ಮೆರವಣಿಗೆ ಮೂಲಕ ತೆರಳಲು ಯತ್ನಿಸಿದ್ದಾರೆ. ತಕ್ಷಣ ರಸ್ತೆ ಮಧ್ಯೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ನೂಕಾಟ ತಳ್ಳಾಟ ನಡೆದಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ಮುಖಂಡರ ಸಹಿತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.