ಕಾಲೇಜು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಫಸ್ಟ್‌ ಪಿಯು ವಿದ್ಯಾರ್ಥಿನಿ

ಕೋಲಾರ(ಮಂಗಳೂರು): ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.

ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪ್ರಾಪ್ತೆ ಗರ್ಭಿಣಿಯಾಗಿರುವ ಬಗ್ಗೆ ಆಕೆಯ ಮನೆಯವರಿಗೆ ತಿಳಿದಿರಲಿಲ್ಲವೇ ಎನ್ನುವ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿದೆ. ಮಗು ಕರುಣಿಸಿದಾತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

2023 ಡಿಸೆಂಬರ್​​ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರ ಮಗುವಿಗೆ ಜನ್ಮ ನೀಡಲು ಕಾರಣವಾದ ಅಪ್ರಾಪ್ತೆಯ ಸೋದರ ಸಂಬಂಧಿಯನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.

LEAVE A REPLY

Please enter your comment!
Please enter your name here