ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದ ಘಟನೆ  ನಗರದ ಬಲ್ಮಠ ರೋಡ್‌ ಸಮೀಪ ನಡೆದಿದೆ.ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿಗೆ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಚರಣೆ ನಡೆಯುತ್ತಿದೆ. ಕಟ್ಟದ ನಿರ್ಮಾಣದ ವೇಳೆ ಘಟನೆ ನಡೆದಿದ್ದು,  ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

UPDATE
ಬಿಹಾರ ಮೂಲದ ಕಾರ್ಮಿಕ ರಾಜ್‌ ಕುಮಾರ್‌ (18) ಮತ್ತು ಉತ್ತರ ಪ್ರದೇಶದ ಕಾರ್ಮಿಕ ಚಂದನ್‌ ಕುಮಾರ್‌ (30ವ) ಮಣ್ಣಿನಡಿ ಸಿಳುಕಿದ ಕಾರ್ಮಿಕರಾಗಿದ್ದಾರೆ.ಈ ಪೈಕಿ ರಾಜ್‌ ಕುಮಾರ್‌ ನನ್ನು ರಕ್ಷಿಸಲಾಗಿದ್ದು, ಚಂದನ್‌ ಕುಮಾರ್‌ ಗಾಗಿ  ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಡಿಸಿ ಸಂತೋಷ್ ಕುಮಾರ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಸಿದ್ದಾರ್ಥ್ ಗೋಯಲ್ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಕಟ್ಟಡಕ್ಕೆ ವಾಟರ್ ಪ್ರೂಫ್ ಮಾಡುತ್ತಿದ್ದ ವೇಳೆ ಕಟ್ಟಡದ ಬದಿಯಲ್ಲಿದ್ದ ಮಣ್ಣು ಏಕಾಏಕಿ ಕುಸಿದಿದೆ. ಆದರೆ ಅಡ್ಡಲಾಗಿ ಸ್ಲ್ಯಾಬ್ ಇದ್ದ ಕಾರಣ ಅವರ ಮೇಲೆ ಮಣ್ಣು ಬಿದ್ದಿಲ್ಲ. ಅವರಿಗೆ ಬಿಲ್ಡಿಂಗ್ ಕೊರೆದು ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ರೀತಿ ನೀರು ಆಹಾರ ಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ‌. ಸ್ಥಳದಲ್ಲಿ ಆರೋಗ್ಯ ಇಲಾಖೆ ಆಗಮಿಸಿದ್ದು, ಕಾರ್ಯಾಚರಣೆ ನಡೆದ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲು ಆ್ಯಂಬುಲೆನ್ಸ್ ಕೂಡ ತಯಾರು ಮಾಡಲಾಗಿದೆ.

LEAVE A REPLY

Please enter your comment!
Please enter your name here