ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ, ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜು.6ರಂದು ಹಲವು ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.
ಬೆಂಗಳೂರಿನ ಐಫೋನ್, ಟಿಟಿಪಿ ಟೆಕ್ನಾಲಾಜಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮ ಮಾಡಿರುವ ಉದ್ಯೋಗಾಕಾಂಕ್ಷಿಗಳು ಇದರ ಪೂರ್ಣ ಲಾಭ ಪಡೆದುಕೊಳ್ಳುವಂತೆ ಶಾಸಕರು ತಿಳಿಸಿದ್ದಾರೆ. ಜು.6ರಂದು ಶಾಸಕರ ಕಚೇರಿ ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದ್ದು ಆಸಕ್ತರು 4 ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಶೈಕ್ಷಣಿಕ ಪ್ರಮಾಣ ಪತ್ರದೊಂದಿಗೆ ಶಾಸಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಆರ್ ಶೆಟ್ಟಿ ತಿಳಿಸಿದ್ದಾರೆ.