ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ʼ ಘೋಷಣೆ

ಮಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಜು. 7ರ ಇಂದು, ಕರ್ನಾಟಕ, ಕೇರಳ, ಮಹಾರಾಷ್ಟ್ರ, ದೆಹಲಿ, ಗಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಫರಿದಾಬಾದ್ ಮತ್ತು ಗುರ್ಗಾಂವ್ ಮತ್ತು ಹತ್ತಿರದ ಇತರ ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜು. 7 ರಿಂದ 12 ರವರೆಗೆ ದೆಹಲಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ, ಅರೆಂಜ್‌, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶ, ಹರಿಯಾಣ ರಾಜ್ಯಗಳಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಜುಲೈ 12 ರವರೆಗೆ ಉತ್ತರ ಪ್ರದೇಶದ ವಿವಿಧ ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 7 ರಂದು ಅಮ್ರೋಹಾ, ಮೊರಾದಾಬಾದ್, ರಾಂಪುರ, ಬರೇಲಿ, ಪಿಲಿಭಿತ್ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here