ಮಳೆಗಾಲ ಮುಗಿಯುವವರೆಗೆ ದ ಕ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ- ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧ – ಡಿ ಸಿ ಮುಲ್ಲೈ ಮುಗಿಲನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ದ.ಕ. ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here