ಉಳ್ಳಾಲ ಖಾಝಿ ಸಯ್ಯದ್‌ ಫಝಲ್‌ ಕೋಯಮ್ಮ ತಂಙಳ್‌ (ಕೂರ ತಂಙಳ್) ನಿಧನ

ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್‌ ಫಝಲ್‌ ಕೋಯಮ್ಮ ತಂಙಳ್‌ ನಿಧನರಾಗಿದ್ದಾರೆ.
ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಙಳ್‌ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ.
ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಇಂದು ರಾತ್ರಿ 9 ಗಂಟೆ ವೇಳೆಗೆ ಕೂರ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.ಇಂದು ಅಪರಾಹ್ನ 2ಗಂಟೆಯವರೆಗೆ ಇಟ್ಟಿಕುಳಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು,ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿಗೆ ತರಲಾಗುತ್ತದೆ. ಇಲ್ಲಿ ಸಂಜೆ 5 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಪಾರ್ಥಿವ ಶರೀರವನ್ನು ಕೂರ ಮಸೀದಿಗೆ ತರಲಾಗುವುದು. ಸುಲ್ತಾನುಲ್‌ ಉಲಮಾ ಎ ಪಿ ಅಬೂಬಕ್ಕರ್‌ ಮುಸ್ಲಿಯಾರ್‌ ಜನಾಝಾ ನಮಾಝ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ತಂಙಳ್‌ ನಿಧನಕ್ಕೆ ಅಶ್ರಫ್‌ ಬುಳೇರಿಕಟ್ಟೆ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here