ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ಸೋಂಕು – ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಂಗಳೂರು: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ನಾಲ್ಕರು ಬಲಿಯಾಗಿದ್ದು, ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಕಲುಷಿತ ನೀರಿನಲ್ಲಿ ಕಂಡುಬರುವ ನೆಗ್ಗೇರಿಯಾ ಫೌಲೇರಿ ಹೆಸರಿನ ಅಪರೂಪದ ಹಾಗೂ ಅಪಾಯಕಾರಿ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕಿಗೆ ಕೇರಳದಲ್ಲಿ ಈಗಾಗಲೇ ನಾಲ್ವರು ಬಲಿಯಾಗಿದ್ದಾರೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಸೋಂಕು ಹರಡುವ ಆತಂಕದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಸ್ವಿಮ್ಮಿಂಗ್ ಫೂಲ್ ನಲ್ಲಿ ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here