ಮಂಗಳೂರು/ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹೊತ್ತಿ ಉರಿದಿದೆ. ನಗರದ ಎಂ ಜಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಬಸ್ನಲ್ಲಿ 30 ಜನ ಪ್ರಯಾಣಿಸುತ್ತಿದ್ದು ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂ ಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ನಲ್ಲಿ ಚಾಲಕ ಬಸ್ ಬಂದ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
https://x.com/DarshanDevaiahB/status/1810535277229670633