ತಾಕತ್ತಿದ್ದರೆ ಕಾಂಗ್ರೆಸ್‌ ನ ಒಬ್ಬ ಕಾರ್ಯಕರ್ತನ ಮೈ ಮುಟ್ಟಿ ನೋಡಲಿ – ಭರತ್ ಶೆಟ್ಟಿಗೆ ರಮಾನಾಥ ರೈ ಟಾಂಗ್

ಮಂಗಳೂರು: ರಾಹುಲ್ ಗಾಂಧಿಯವರ ಕುರಿತು ಏಕವಚನದಲ್ಲಿ ಮಾತನಾಡಿ ‘ಕೆನ್ನೆಗೆ ಬಾರಿಸಬೇಕು’ ಎಂದು ಹೇಳಿಕೆ ನೀಡಿರುವ ಶಾಸಕ ಡಾ| ಭರತ್ ಶೆಟ್ಟಿ ಒಬ್ಬ ನಾಲಾಯಕ್ ರಾಜಕಾರಣಿ. ಆತನಿಗೆ ತಾಕತ್ತಿದ್ದರೆ, ಗಂಡು ಮಗ ಆಗಿದ್ದರೆ ಜಿಲ್ಲೆಯ ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಅವರು ಸವಾಲು ಹಾಕಿದ್ದಾರೆ.

ಮಂಗಳವಾರ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಲೆ ಸರಿಲ್ಲ, ಹುಚ್ಚ’ ಎನ್ನುವ ಪದಗಳನ್ನೂ ಭರತ್ ಶೆಟ್ಟಿ ಬಳಸಿದ್ದು, ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಮೇಲೂ ಬಿಜೆಪಿಯವರು ಸಾಕಷ್ಟು ಆರೋಪ ಮಾಡಿದ್ದಾರೆ. ಹುಟ್ಟನ್ನೇ ಪ್ರಶ್ನಿಸಿ ತಾಯಿಯ ಮೇಲೆ ಆರೋಪ ಮಾಡಿದ್ದಾರೆ. ಇದು ಬಿಜೆಪಿಯವರ ನಡವಳಿಕೆ. ಆದರೆ ನಾವು ಅಂತಹ ಪ್ರಶ್ನೆಗಳನ್ನು ಕೇಳುವುದಿಲ್ಲ. ಆದರೆ ನಾವೇನು ಬಳೆ ತೊಟ್ಟು ಕುಳಿತುಕೊಳ್ಳುವುದಿಲ್ಲ, ಜಿಲ್ಲೆಯಲ್ಲಿ ಪಕ್ಷ ಸೋತಿರಬಹುದು, ಆದರೆ ಸತ್ತಿಲ್ಲ. ಸರಕಾರ ಅವರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here