ಮಂಗಳೂರು/ಉತ್ತರಪ್ರದೇಶ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಬೆಳಗ್ಗೆ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದು 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಸ್ ಬಿಹಾರದ ಸೀತಾರ್ಮಹಿಯಿಂದ ದೆಹಲಿ ಕಡೆ ತೆರಳುತ್ತಿತ್ತು. ಈ ವೇಳೆ ಗರ್ಹಾ ಗ್ರಾಮದ ಬಳಿ ಹಾಲಿನ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸೊಂದು ಓವರ್‌ಟೇಕ್ ಮಾಡುವ ಯತ್ನದಲ್ಲಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಡಿಕ್ಕಿಯಿಂದಾಗಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 18 ಜನರು ಸಾವನ್ನಪ್ಪಿದ್ದು 15 ಜನರ ಸ್ಥಿತಿ ಗಂಭೀರವಾಗಿದೆ. ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ. ಭೀಕರ ಅಪಘಾತಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ.