ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಮಹಾನಗರಪಾಲಿಕೆ ಸದಸ್ಯ ಕಾಂಗ್ರೆಸ್ ಪಕ್ಷದ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.