ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳಲು ಅರ್ಹಳು – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮಂಗಳೂರು/ನವದೆಹಲಿ: ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಕೇಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂ ಕೋರ್ಟ್ ಬುಧವಾರ (ಜು.10) ಮಹತ್ವದ ತೀರ್ಪು ನೀಡಿದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯರು ತಮ್ಮ ಗಂಡನಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ತನ್ನ ಪತ್ನಿಗೆ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇಂದು ನಡೆದ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಮೊಹಮ್ಮದ್ ಅಬ್ದುಲ್ ಸಮದ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನದ ವಿರುದ್ಧ ಮೊಹಮ್ಮದ್ ಅಬ್ದುಲ್ ಸಮದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ ತಿರಸ್ಕರಿಸಿದೆ.

LEAVE A REPLY

Please enter your comment!
Please enter your name here