



ಮಂಗಳೂರು: ಮಂಗಳೂರು ತಾಲೂಕಿಗೆ ಸಂಬಂಧ ಪಟ್ಟ ಲೋಕಾಯುಕ್ತ ಜನ ಸಂಪರ್ಕ ಸಭೆ ಜು.10ರಂದು ಬೆಳಿಗ್ಗೆ 11ರಿಂದ ಅಪರಾಹ್ನ 1ರವರೆಗೆ ಮಂಗಳೂರು ತಾಲೂಕು ಕಛೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ್ ಉಪಸ್ಥಿತಿಯಲ್ಲಿ ನಡೆಯಿತು.







ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಉಪಾಧೀಕ್ಷಕರಾದ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಸಾರ್ವಜನಿಕ ವಲಯದಿಂದ ಕಂದಾಯ ಇಲಾಖೆ, ಭೂದಾಖಲೆಗಳ ಇಲಾಖೆ, ಮಂಗಳೂರು ಮಹಾನಗರಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಮೆಸ್ಕಾಂ ಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದಂತೆ 10 ದೂರುಗಳು ಸಭೆಯಲ್ಲಿ ಸ್ವೀಕೃತವಾಗಿತ್ತು. ಹೆಚ್ಚಿನ ದೂರುಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದ್ದು, ಬಾಕಿ ಉಳಿದ ದೂರುಗಳನ್ನು ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.















