ಮಂಗಳೂರು/ಬೆಂಗಳೂರು: ಕರ್ನಾಟಕದಾದ್ಯಂತ ಗುರುವಾರ ಬೆಳ್ಳಂ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡ್ಯ, ಮೈಸೂರು, ಹಾಸನ, ಚಿತ್ರದುರ್ಗ ಸೇರಿದಂತೆ 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.
ಕೋಲಾರ ತಹಶೀಲ್ದಾರ್ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹಾಸನದ ಗ್ರೇಡ್-1 ಕಾರ್ಯದರ್ಶಿ ಜಗದೀಶ್ ಮನೆ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.