ಮಂಗಳೂರು/ನೆಲ್ಯಾಡಿ: ಇಂದು(ಜು.12) ಮಧ್ಯಾಹ್ನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೋಲ್ಪೆಯಲ್ಲಿ ಬೈಕ್ ಮತ್ತು ಪಿಕಪ್ ಡಿಕ್ಕಿ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಬೈಕ್ ಸವಾರ ಕೊನೆಯುಸಿರೆಳೆದಿದ್ದಾರೆ.
ಮೃತ ಬೈಕ್ ಸವಾರರನ್ನು ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಾಮ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರೆಸೆಂಟೆಟೀವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಣಾಮ್ ಉಪ್ಪಿನಂಗಡಿಯಿಂದ ಬೈಕ್ ನಲ್ಲಿ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೋಲ್ಪೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಣಾಮ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಮೃತ ಪಟ್ಟಿರುತ್ತಾರೆ.