



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಮೊದಲ ಬಲಿ ಪಡೆದಿದೆ. ಬಂಟ್ವಾಳ ತಾಲೂಕಿನ ಶಂಭೂರು ಮೂಲದ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಯತೀಶ್(50) ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.




ಜು.10ರಂದು ಯತೀಶ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯತೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.13ರಂದು ಮೃತಪಟ್ಟಿದ್ದಾರೆ.















