ಹಾಡ ಹಗಲೇ ಮನೆಗೆ ನುಗ್ಗಿದ ಕಳ್ಳರು- ಚಿನ್ನಾಭರಣ ದೋಚಿ ಪರಾರಿ

ಮಂಗಳೂರು (ಬಂಟ್ವಾಳ): ಹಾಡು ಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಜು.13ರಂದು  ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ನಡೆದಿದೆ.

ಇರಾ ನಿವಾಸಿ ವನಿತಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ.ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ. ಮನೆ ಮಂದಿ ಶನಿವಾರ ಬೆಳಿಗ್ಗೆ 7.30 ರ ವೇಳೆಗೆ ಕೆಲಸಕ್ಕೆ ಹೊರಗಡೆ ಹೋಗಿದ್ದಾರೆ. ಈ ಮಧ್ಯೆ ವನಿತಾ ಅವರ ಅಕ್ಕ ಸುಜಾತ ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ಮಾಹಿತಿ ನೀಡಿದ್ದಾರೆ. ಸಂಜೆ 5ರ ವೇಳೆಗೆ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here