ಮಂಗಳೂರು(ಉಡುಪಿ): ಕರಾವಳಿ ಮಲೆನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಆಗುಂಬೆ ಘಾಟಿನ 4ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಭಾರಿ ಮಳೆಗೆ ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಗುಡ್ಡ ಕುಸಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಮಣ್ಣು ತೆರವು ಕಾರ್ಯ ನಡೆಸುತ್ತಿದ್ದಾರೆ. ಇದರಿಂದ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಗುಡ್ಡ ಮತ್ತಷ್ಟು ಕುಸಿದರೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ಈಗ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಿದೆ.