ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಪ್ರಕರಣದ ಕಿಂಗ್ ಪಿನ್ ಬಂಧನ

ಮಂಗಳೂರು/ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೂ ಎಂಬಿಬಿಎಸ್ ಅಧ್ಯಯನಕ್ಕೆ ಸರಕಾರಿ ಸೀಟು ಕೊಡಿಸುವುದಾಗಿ ವಿವಿಧ ರಾಜ್ಯಗಳ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಪ್ರಕರಣವನ್ನು ಭೇದಿಸಿದ ಬೆಳಗಾವಿ ನಗರ ಪೊಲೀಸರು ಪ್ರಕರಣದ ಕಿಂಗ್ ಪಿನ್, ತೆಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್‌ ಅರುಣಕುಮಾರ್ ಅರಗೊಂಡ ಪ್ರಕಾಶಂ ಎಂಬಾತನನ್ನು ಮುಂಬೈಯಲ್ಲಿ ಬಂಧಿಸಿದ್ದಾರೆ.

ಆರೋಪಿಯಿಂದ 12 ಲಕ್ಷ ರೂ,5 ಮೊಬೈಲ್, 15 ಸಿಪಿಯು ಮಾನಿಟರ್, 1 ಲ್ಯಾಪ್‌ಟಾಪ್, ತಲಾ ಮೂರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್, 12 ಅಡಾಪ್ಟರ್, 1 ಬಯೋಮೆಟ್ರಿಕ್ ಹಾಗೂ 1 ಡಿವಿಆರ್ ವಶಪಡಿಸಿಕೊಳ್ಳಲಾಗಿದೆ. ಆತನ ವಿರುದ್ಧ ಈಗಾಗಲೇ ತೆಲಂಗಾಣದಲ್ಲಿ 6, ಭೂಪಾಲ್‌ನಲ್ಲಿ 1, ಬೆಂಗಳೂರಿನ ಅಶೋಕ ನಗರ ಹಾಗೂ ಆರ್.ಟಿ.ನಗರದ ಪೊಲೀಸ್ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ. ಎಂಬಿಎ ಪದವೀಧರನಾದ ಪ್ರಕಾಶಂ ಹೈಟೆಕ್ ಕಚೇರಿ ನಿರ್ಮಿಸಿಕೊಳ್ಳುತ್ತಿದ್ದ. ಆಯಾ ರಾಜ್ಯದ ವಿದ್ಯಾರ್ಥಿಗಳನ್ನು ಸೆಳೆಯಲೆಂದೇ ಸ್ಥಳೀಯರನ್ನು ತನ್ನಲ್ಲಿ ನೌಕರರನ್ನಾಗಿ ನೇಮಿಸಿಕೊಳ್ಳುತ್ತಿದ್ದ. ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರೂ ಎಂಬಿಬಿಎಸ್ ಗೆ ಸರಕಾರಿ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಪರಾರಿಯಾಗುತ್ತಿದ್ದ .

LEAVE A REPLY

Please enter your comment!
Please enter your name here