ಚೀನಾ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ – 14 ಮಂದಿ ಸಾವು

ಮಂಗಳೂರು/ಚೀನಾ: ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಜು.17ರಂದು ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿದೆ.

ಝಿಗಾಂಗ್ ನಗರದ ಹೈಟೆಕ್ ವಲಯದಲ್ಲಿರುವ 14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ತಿಳಿಸಿದೆ. ಬೆಂಕಿ ಕಾಣಿಸುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಮುಂಜಾನೆ 3 ಗಂಟೆಯವರೆಗೂ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿ ಹೇಳಿದೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ನಿರ್ದಿಷ್ಟ ಕಾರಣವನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here