ಪಾರ್ಟಿ ಮಾಡಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು – ಮೂವರು ಯುವಕರು ಸ್ಥಳದಲ್ಲೇ ಸಾವು

ಮಂಗಳೂರು/ಕೊಪ್ಪಳ: ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ.

ಕಳೆದ ರಾತ್ರಿ 9:30ರ ಸುಮಾರಿಗೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕರನ್ನು ಗಂಗಾವತಿ ನಗರದ ನಿವಾಸಿಗಳಾದ ಮೌನೇಶ್ ಪತ್ತಾರ(23), ಸುನೀಲ್(23), ವೆಂಕಟ್ ಭೀಮನಾಯ್ಕ(20) ಎಂದು ಗುರುತಿಸಲಾಗಿದೆ. ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here