



ಮಂಗಳೂರು/ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಮೊದಲ ಬಾರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.







ಆ. 15ರಿಂದ ಶಾರದಾಂಬೆ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.















