ಮಂಗಳೂರು/ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಅಪರಾಧವಲ್ಲ ಎಂಬ ಆದೇಶ ನೀಡಿದ್ದ ರಾಜ್ಯ ಹೈಕೋರ್ಟ್, ಇದೀಗ ಆದೇಶವನ್ನು ವಾಪಸ್ಸು ಪಡೆದಿದೆ. ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಅಪರಾಧವಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದೀಗ ಈ ಆದೇಶದಲ್ಲಿ ತಪ್ಪಿದೆ ಎಂದು ಹೇಳಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಜು.10ರಂದು ಆದೇಶವನ್ನು ನೀಡಿತ್ತು. ಇದೀಗ ಈ ಆದೇಶವನ್ನು ಹಿಂಪಡೆದಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಕ್ಷನ್ 67 ಬಿ(ಬಿ)ಯನ್ನು ಗಮನಿಸಿದೆ ತಪ್ಪಾಗಿ ಈ ಆದೇಶವನ್ನು ನೀಡಿದೆ ಎಂದು ಹೇಳಿದೆ. ಅರ್ಜಿ ಬಗ್ಗೆ ವಿಚಾರಣೆಯನ್ನು ನಡೆಸಲು ಅವಕಾಶ ನೀಡದೇ, ತೀರ್ಪು ನೀಡಿರುವುದು ತಪ್ಪು ಎಂದು ಹೇಳಿದೆ. ಈ ಆದೇಶವನ್ನು ರದ್ದುಗೊಳಿಸುವ ಮೂಲಕ ಹೆಚ್ಚಿನ ವಿಚಾರಣೆ ಅಗತ್ಯ ಎಂದು ಹೇಳಿದೆ. ಇನ್ನು ಒಮ್ಮೆ ಆದೇಶ ಹೊರಡಿಸಿದ ನಂತರ ಈ ಆದೇಶವನ್ನು ಹಿಂಪಡೆಯಲು ಅಥವಾ ಆದೇಶವನ್ನು ಪರಿಶೀಲಿಸಲು ಈ ನ್ಯಾಯಾಲಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರ್ಜಿದಾರರು ಪರ ವಕೀಲರು ವಾದಿಸಿದ್ದಾರೆ. ಈ ಅರ್ಜಿದಾರರ ವಕೀಲರ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು ಸೆಕ್ಷನ್ 362 CrPC ಬಾರ್ ಮೂಲಕ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಹೇಳಲಾಗಿದೆ.