ಮಂಗಳೂರು: ಖಾಸಗಿ ಚಾನೆಲೊಂದರಲ್ಲಿ ಕ್ಯಾಮೆರಾಮೆನ್ ಆಗಿ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ನಿಧನರಾಗಿದ್ದಾರೆ.
ಮೂಲತಃ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದವರಾಗಿದ್ದ ವಿರೇಶ್ ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಮಂಗಳೂರಿನ ಖಾಸಗಿ ಚಾನೆಲ್ ನಲ್ಲಿ ಉದ್ಯೋಗಿಯಾಗಿದ್ದ ಅವರು ಇತ್ತೀಚೆಗೆ ಟಿವಿ 5 ಚಾನೆಲ್ನಲ್ಲಿ ಕ್ಯಾಮೆರಾಮೆನ್ ಆಗಿ ಸೇರಿಕೊಂಡಿದ್ದರು. ಕಳೆದ ಜುಲೈ 7 ರಂದು ಹುಟ್ಟು ಹಬ್ಬ ಹಾಗೂ ಊರ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಗದಗ ಗೆ ತೆರಳಿದ್ದ ವಿರೇಶ್ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಳೂರು ಪತ್ರಕರ್ತರ ಸಂಘದಲ್ಲಿ ಸದಸ್ಯರಾಗಿದ್ದ ವಿರೇಶ್ ಕಡ್ಲಿಕೊಪ್ಪ ನಿಧನಕ್ಕೆ ಜಿಲ್ಲೆಯ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.