ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ – ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮಂಗಳೂರು/ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ ಕಳೆದ ನಾಲ್ಕು ದಿನದಿಂದ ಅಬ್ಬರಿಸಿ ಇಂದು (ಜು.21) ಕೊಂಚ ವಿರಾಮ ನೀಡಿದ್ದಾನೆ. ಮಳೆನಿಂತರೂ ಮಳೆಯಿಂದ ಅವಾಂತರಗಳ ಸರಮಾಲೆಗಳೇ ಸೃಷ್ಟಿಯಾಗಿದ್ದು ಜನ ವರುಣಾರ್ಭಟಕ್ಕೆ ಕಂಗೆಟ್ಟು ಹೋಗಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ನಗರದಿಂದ ದತ್ತಪೀಠಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಕವಿಕಲ್‌ ಗಂಡಿ ಬಳಿ ಗುಡ್ಡ ಕುಸಿದಿದೆ. ರಸ್ತೆ ಮೇಲೆ ಮಣ್ಣು ಮತ್ತು ಕಲ್ಲು ಬಿದ್ದಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದತ್ತಪೀಠಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here