ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ನೇಮಕ – ಆ.5ರಂದು ಅಧಿಕಾರ ಸ್ವೀಕಾರ

ಮಂಗಳೂರು/ಉಳ್ಳಾಲ: ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ಜು.21ರಂದು ನಡೆದ ಮಹಾಸಭೆಯಲ್ಲಿ ಎ.ಪಿ.ಉಸ್ತಾದ್ ಅವರನ್ನು ಖಾಝಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಆಗಸ್ಟ್ 5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here