ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರದಿಂದ ಅಧಿಕೃತ ಆದೇಶ

ಮಂಗಳೂರು/ಬೆಂಗಳೂರು: ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾದ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು  ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಜು.1ರಿಂದ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ನಡವಳಿಯನ್ನು ಹೊರಡಿಸಿದ್ದಾರೆ. ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜು. 01,2022 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here