



ಮಂಗಳೂರು/ಬಂಟ್ವಾಳ: ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಈ ಘಟನೆ ನಡೆದಿದ್ದು, ಬುಡೋಳಿ ಮಡಲ ನಿವಾಸಿ ಸುಶಾಂತ್(25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.







ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಸುಶಾಂತ್ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡಿದ್ದು,ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.ಸ್ಥಳೀಯರೊಂದಿಗೆ ಉತ್ತಮ ರೀತಿಯ ಒಡನಾಟ ಇರಿಸಿಕೊಂಡಿದ್ದ ಸುಶಾಂತ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















