



ಮಂಗಳೂರು:ಮಂಗಳೂರು ನಗರದ ಊರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವಘಡ ಸಂಭವಿಸಿದೆ.







ಕಟ್ಟಡದ ಮುಖ್ಯ ವಿದ್ಯುತ್ ಜಂಕ್ಷನ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು,ಬೆಂಕಿ ಕಾಣಿಸಿಕೊಂಡಿದೆ.ಕಚೇರಿಯಲ್ಲಿ ಕಾರ್ಯನಿರತರಾಗಿದ್ದ ಸಿಬ್ಬಂದಿಗಳು, ಅಧಿಕಾರಿಗಳು ತಕ್ಷಣ ಹೊರೆಗೋಡಿದ್ದಾರೆ.ಕಟ್ಟಡದಲ್ಲಿ ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.



ಸ್ಥಳಕ್ಕೆ ಕದ್ರಿ ಅಗ್ನಿ ಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.












