ಮಂಗಳೂರು : ಇಂದು ಜು. 25ರಂದು ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಮೀನುಗಾರರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50 ಕಿ.ಮಿ ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಅದೇ ರೀತಿ ಜುಲೈ 26ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಜುಲೈ 27,28ರಂದು ಕರಾವಳಿಯ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.