ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹಕ್ಕೆ ನಸುಕಿನ 4 ಗಂಟೆಗೆ ಮಂಗಳೂರು ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿಗಳ ಸಹಿತ 150 ಪೋಲಿಸರು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಡಿವೈಸ್, ಐದು ಇಯರ್ ಫೋನ್‌ಗಳು, ಒಂದು ಪೆನ್ ಡ್ರೈವ್, ಐದು ಚಾರ್ಜರ್‌ಗಳು, ಒಂದು ಜೊತೆ ಕತ್ತರಿ, ಮೂರು ಕೇಬಲ್‌ಗಳು, ಜೊತೆಗೆ ಗಾಂಜಾ ಮತ್ತು ಇತರ ಡ್ರಗ್ಸ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು. ಸಾಕಷ್ಟು ಭದ್ರತೆಯ ನಡುವೆಯೂ ಮೊಬೈಲ್ ಫೋನ್ ಮತ್ತಿತರ ಸಾಮಗ್ರಿಗಳು, ಗಾಂಜಾ ಮತ್ತು ಡ್ರಗ್ಸ್‌ಗಳನ್ನು ಜೈಲಿನೊಳಗೆ ಹೇಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು. ದಾಳಿ ನಡೆಸುವ ಕೊನೆಯ ಕ್ಷಣದವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.