ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಶರಣ್‌ ಪಂಪ್ ವೆಲ್ ಮನವಿ

ಮಂಗಳೂರು: ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಲು ಸೂಚಿಸಿದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ ಎಂದು ಕರ್ನಾಟಕ ವಿಶ್ವ ಹಿಂದೂ ಪರಿಷದ್ ಸಹ ಕಾರ್ಯದರ್ಶಿ  ಶರಣ್ ಕುಮಾರ್ ಪಂಪ‌ ವೆಲ್ ಹೇಳಿದ್ದಾರೆ.

ಶೃಂಗೇರಿ ಮಠದ ಈ ವಸ್ತ್ರ ಸಂಹಿತೆಯ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಕರ್ನಾಟಕದ ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ಎಲ್ಲಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಸಮಸ್ತ ಹಿಂದೂ ಸಮಾಜದ ಪರವಾಗಿ ವಿಶ್ವ ಹಿಂದೂ ಪರಿಷದ್ ರಾಜ್ಯ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಹಾಗೂ ದತ್ತಿ ಇಲಾಖೆಗೆ ಸಂಬಂಧ ಪಟ್ಟ ದೇವಸ್ಥಾನಗಳಲ್ಲಿ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here