ಮಂಗಳೂರು(ಉಪ್ಪಿನಂಗಡಿ): ಭಾರೀ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರವತಿ ಮತ್ತು ಕುಮಾರದಾರ ನದಿಗಳ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಸದ್ಯ 29.09 ಮೀಟರ್ ನಷ್ಟು ನದಿ ನೀರಿನ ಹರಿವು ಇದ್ದು ಅಪಾಯದ ಮಟ್ಟ 31.05 ಆಗಿದೆ. ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದ್ದು, ಜನರು ಆತಂಕದಲ್ಲಿದ್ದಾರೆ.
ಇಲ್ಲಿನ ಹಳೆಗೇಟು ಎಂಬಲ್ಲಿ ಐತ ಮುಗೇರ ಎಂಬವರ ಮನೆ ಭಾಗಶಃ ನೀರಿನಲ್ಲಿ ಮುಳುಗಡೆಯಾಗಿದ್ದು ಕುಟುಂಬವನ್ನು ಸ್ಥಳಾಂತರಿಸಲಾಗಿದೆ. ಪಂಜಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳು ಸಂಚರಿಸುತ್ತಿದೆ.