ಮಂಗಳೂರು/ಹಿಮಾಚಲ ಪ್ರದೇಶ: ದೇಶಾದ್ಯಂತ ಭಾರಿ ಮಳೆಯಾಗುತ್ತಿದೆ, ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.ಮೂವರು ಮೃತಪಟ್ಟಿದ್ದು 40 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ.
ಸದ್ಯ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 40 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.
ಶಿಮ್ಲಾದ ರಾಂಪುರ್ ತಾಲೂಕಿನ ಸಮಘ್ ಖುದ್ ನಲ್ಲಿ ಸಂಭವಿಸಿದ ಮೇಘ ಸ್ಪೋಟದಲ್ಲಿ ಹಲವು ಮನೆಗಳು ಹಾಗೂ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು ಎರಡು ಜಲವಿದ್ಯುತ್ ಸ್ಥಾವರಗಳಿಗೆ ಹಾನಿಯಾಗಿದೆ.ರಕ್ಷಣಾ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ.