ಮೋರಿಗೆ ಬೈಕ್ ಡಿಕ್ಕಿ – ಧರ್ಮಸ್ಥಳಕ್ಕೆ ಹೊರಟಿದ್ದ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

ಮಂಗಳೂರು (ಮಡಿಕೇರಿ): ಬೈಕೊಂದು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿದೆ. ಮೃತರನ್ನು ಮೈಸೂರು ಮೂಲದ ಯುವಕರಾದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಧರ್ಮಸ್ಥಳಕ್ಕೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಳೆದ ರಾತ್ರಿ ವೇಳೆ ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ಮೋರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸವಾರರಿಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here