ಮದ್ಯದ ಅಮಲು – ಮಗನಿಂದಲೇ ತಾಯಿ‌ಯ ಅತ್ಯಾಚಾರ

ಮಂಗಳೂರು (ಚಿಕ್ಕಬಳ್ಳಾಪುರ): ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಆ.4ರ ರಾತ್ರಿ ನಡೆದಿದೆ. ಕೃತ್ಯದ ಬಳಿಕ ತಂದೆ, ತಾಯಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ಆರೋಪಿ ಪರಾರಿಯಾಗಿದ್ದಾನೆ.

ಘಟನಾ ಸಂಬಂಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆ, ತಾಯಿಯೊಂದಿಗೆ ವಾಸವಾಗಿದ್ದ ಆರೋಪಿ ಆ.4ರ ರಾತ್ರಿ ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಆರೋಪಿಗೆ ಮದುವೆಯಾಗಿದ್ದು, ಪತ್ನಿ ಈತನಿಂದ ದೂರವಿದ್ದಳು ಎಂದು ಹೇಳಲಾಗಿದೆ.

ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here