ಬೆಂಗಳೂರು: ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ನಿನ್ನೆ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದಿದೆ. ರಾಜ್ಯದಲ್ಲಿ ಮಳೆ ಕ್ಷೀಣವಾಗಿದ್ದ ಬೆನ್ನಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು.
ಸAಜೆ ನಂತರ ಮೋಡ ಕವಿದ ವಾತಾವರಣವಿತ್ತು. ಸಂಜೆ 5 ಗಂಟೆ ನಂತರ ಆರಂಭವಾದ ಜೋರು ಮಳೆ ಮಧ್ಯರಾತ್ರಿವರೆಗೂ ಸುರಿದಿದೆ. ಮುಂದಿನ 2 ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೇ ಮಳೆ ಆರಂಭವಾಗಿದ್ದು, ಮಂಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚೆನ ನೀಡಿದೆ.