ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡಿದ ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ ಆಟೋರಿಕ್ಷಾಗಳೊಂದಿಗೆ ಇ-ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್/ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳು 2022ರ ನವಂಬರ್ 24ರಂದು ಮತ್ತು 2023ರ ಜನವರಿ 23ರಂದು ಹೊರಡಿಸಿದ್ದ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.
ಮೋಟಾರು ವಾಹನ ಕಾಯಿದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬAಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here