ಮಂಗಳೂರು (ಬೆಂಗಳೂರು): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.
ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು,ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ(ಆ.8) ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿರುವ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದು ಪ್ರಕರಣ ನಾಳೆ ಶುಕ್ರವಾರ(ಆ. 9) ವಿಚಾರಣೆಗೆ ಬರುವ ನಿರೀಕ್ಷೆ ಇದೆ.
ಫಿರ್ಯಾದುದಾರರ ಪರವಾಗಿ ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಲಕ್ಷ್ಮಿ ಅಯ್ಯಂಗಾರ್ ಗುರುವಾರ ಮಧ್ಯಾಹ್ನ ದೂರು ದಾಖಲಿಸಿದ್ದಾರೆ. ಹೈಕೋರ್ಟ್ ನ್ಯಾಯವಾದಿ ವಸಂತ ಕುಮಾರ್ ವಕಾಲತ್ತು ವಹಿಸಿದ್ದಾರೆ.