ಹಿಂಡೆನ್‌ಬರ್ಗ್‌ ವರದಿ ಔಟ್ – ಸೆಬಿ ಮುಖ್ಯಸ್ಥೆಯ ಪತಿ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಭಾಗಿ

ಮಂಗಳೂರು(ಅಮೇರಿಕಾ): ಭಾರತದ ಶ್ರೀಮಂತ ಗೌತಮ್ ಅದಾನಿ ಗ್ರೂಪ್‌ನ ಷೇರುಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡೆನ್‌ಬರ್ಗ್‌ ಬಹಿರಂಗಪಡಿಸಿದ್ದ ವರದಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವಿಚಾರದಲ್ಲಿ ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಂದು ವರದಿಯನ್ನು ಬಿಡುಗಡೆ ಮಾಡಿದ್ದು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಆರೋಪಿಸಿದೆ.

ಅಮೆರಿಕಾದ ಶಾರ್ಟ್ ಸೆಲ್ಲರ್ ಸಂಸ್ಥೆಯು ಇಂದಿನ ಪೋಸ್ಟ್‌ನಲ್ಲಿ, ‘ಭಾರತದಲ್ಲಿ ಶೀಘ್ರದಲ್ಲೇ ದೊಡ್ಡದೊಂದು ಸಂಭವಿಸುತ್ತದೆ’ ಎಂದು ಬರೆದುಕೊಂಡಿತ್ತು. ಇದು ದೇಶದಲ್ಲಿ ಭಾರೀ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ವರದಿ ಬಿಡುಗಡೆ ಮಾಡಿದ್ದು ಅದಾನಿ ಗ್ರೂಪ್ ಮತ್ತು ಸೆಬಿ ಮುಖ್ಯಸ್ಥರ ನಡುವೆ ಸಂಬಂಧವಿದೆ ಎಂದು ಹಿಂಡೆನ್‌ಬರ್ಗ್ ಈ ವರದಿಯಲ್ಲಿ ಹೇಳಿಕೊಂಡಿದೆ. ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ಘಟಕಗಳಲ್ಲಿ ಸೆಬಿ ಅಧ್ಯಕ್ಷ ಮಾಧವಿ ಪುರಿ ಬುಚ್ ಪಾಲು ಹೊಂದಿದ್ದಾರೆ ಎಂದು ವಿಸ್ಲ್‌ಬ್ಲೋವರ್‌ನಿಂದ ಪಡೆದ ದಾಖಲೆಗಳು ತೋರಿಸುತ್ತವೆ ಎಂದು ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ವಿಸ್ಲ್‌ಬ್ಲೋವರ್ ದಾಖಲೆಗಳನ್ನು ಉಲ್ಲೇಖಿಸಿ, ವರದಿಯಲ್ಲಿ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅವರು 2015ರ ಜೂನ್ 5ರಂದು ಸಿಂಗಾಪುರದಲ್ಲಿ ಐಪಿಇ ಪ್ಲಸ್ ಫಂಡ್ 1 ನಲ್ಲಿ ತಮ್ಮ ಖಾತೆ ತೆರೆದಿದ್ದಾರೆ ಎಂದು ಬರೆದಿದ್ದಾರೆ. ಇದರಲ್ಲಿ ದಂಪತಿಗಳ ಒಟ್ಟು ಹೂಡಿಕೆಯು 10 ಮಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ.

ಹಿಂಡೆನ್ ಬರ್ಗ್‌ನಿಂದ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಅವರ ಕುರಿತ ಸ್ಪೋಟಕ ವರದಿ ಬರುತ್ತಿದ್ದಂತೆ ಸೆಬಿಯ ಅಧಿಕೃತ ಎಕ್ಸ್‌ ಖಾತೆ ಲಾಕ್‌ ಆಗಿದೆ ಎಂದು ತಿಳಿದುಬಂದಿದೆ. ಹಿಂಡೆನ್ ಬರ್ಗ್‌ ಆರೋಪಗಳು ಆಧಾರ ರಹಿತವಾಗಿವೆ ಎಂದಿರುವ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಮತ್ತು ಧವಲ್‌ ಬುಚ್ ತಮ್ಮ ‌ ಹಣಕಾಸು ವ್ಯವಾಹಾರಗಳು ತೆರೆದ ಪುಸ್ತಕದಂತೆ ಎಂದು ಹೇಳಿದ್ದು, ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.

LEAVE A REPLY

Please enter your comment!
Please enter your name here