ಚನ್ನಪಟ್ಟಣ ಉಪ ಚುನಾವಣೆ – ನಾನೇ ಅಭ್ಯರ್ಥಿ ಎಂದ ಡಿಕೆ ಶಿವಕುಮಾರ್

ಮಂಗಳೂರು (ಬೆಂಗಳೂರು ಗ್ರಾಮಾಂತರ): ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆ ಬಳಿಕ ಖಾಲಿ ಇರುವ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಎಲ್ಲಿಲ್ಲದ ಪೈಪೋಟಿ ಆರಂಭವಾಗಿದೆ. ಬೊಂಬೆನಾಡು ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಪಟ್ಟಂತೆ ಕಾಂಗ್ರೆಸ್​ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿಂದು ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿಸಿಎಂ, ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು. ನಮ್ಮ ಡ್ಯೂಟಿ ನಾವು ಮಾಡಿದ್ದೇವೆ, ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ.

ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರ, ಚರ್ಚೆ ಯಾವ ಸಚಿವರು ಏನೂ ಮಾತನಾಡಲ್ಲ, ಏನೂ ಇಲ್ಲ. ಅನುಕೂಲ ಇರುವವರಿಗೂ ಕೊಡುತ್ತಿದ್ದಾರೆ. ಅದಕ್ಕೆ ಅವರು ಬೇಡ ಎಂದು ಹೇಳುತ್ತಿದ್ದಾರೆ. ಅದರ ಬಗ್ಗೆ ಮುಂದೆ ಯೋಚನೆ ಮಾಡ್ತೇವೆ, ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here