ಫರಂಗಿಪೇಟೆ ಬಳಿ ಬಸ್‌ ಪಲ್ಟಿ – 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಪಲ್ಟಿಯಾಗಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.  ಅವರೆಲ್ಲರನ್ನೂ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here