ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಅಡ್ಡೆ ಮೇಲೆ ದಾಳಿ – ಮೂವರ ಬಂಧನ

ಮಡಿಕೇರಿ (ಕೊಡಗು): ಕೊಡಗಿನಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಶಿವರಾಮ್, ರವಿ, ಕೋಟಿ ಬಂಧಿತ ಆರೋಪಿಗಳು.

ಕೇರಳದ ಇಡುಕ್ಕಿ ಮೂಲದ ಸುರೇಶ್ ಎಂಬಾತನ ನೇತೃತ್ವದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಸಿದ್ಧವಾಗುತ್ತಿದ್ದವು ಎನ್ನಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.  ದಾಳಿಯ ವೇಳೆ ಆರೋಪಿಗಳಿಂದ 2 ನಾಡ ಬಂದೂಕು, 1 ನಾಡ ಪಿಸ್ತೂಲು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here