ಮತ್ತೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ- ಬಾಳ್ಳುಪೇಟೆ ಬಳಿ ನಿಂತ ರೈಲು – ಪ್ರಯಾಣಿಕರ ಪರದಾಟ

ಮಂಗಳೂರು (ಹಾಸನ): ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದು ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಎರಡು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತಿದೆ.

ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ನೂರಾರು ಪ್ರಯಾಣಿಕರು ರೈಲು ಸಂಚಾರ ಸ್ಥಗಿತಗೊಂಡ ಹಿನ್ನಲೆಯಲ್ಲಿ ಪರದಾಡುವಂತಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here